Surprise Me!

ರಾಣೇಬೆನ್ನೂರಿನಿಂದ ಸ್ಪರ್ಧಿಸಲಿದ್ದಾರೆ ಬಿ ಎಸ್ ವೈ ಪುತ್ರ ಬಿ ವೈ ರಾಘವೇಂದ್ರ | Oneindia Kannada

2017-10-27 16 Dailymotion

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ.ರಾಘವೇಂದ್ರ ಕ್ಷೇತ್ರ ಬದಲಾವಣೆ ಮಾಡುವ ಸಾಧ್ಯತೆ ಇದೆ. 2018ರ ವಿಧಾನಸಭೆ ಚುನಾವಣೆಗೆ ರಾಘವೇಂದ್ರ ರಾಣೆಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ಅವರು ಶಿಕಾರಿಪುರದಿಂದ ಸ್ಪರ್ಧಿಸಿದರೆ, ಬಿ.ವೈ.ರಾಘವೇಂದ್ರ ಶಿಕಾರಿಪುರ ಪಕ್ಕದ ರಾಣೆಬೆನ್ನೂರಿನಿಂದ ಸ್ಪರ್ಧಿಸಲಿದ್ದಾರೆ. ಇದು ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರ ಕ್ಷೇತ್ರ. ಆದರೆ, ಮುಂದಿನ ಚುನಾವಣೆಯಲ್ಲಿ ಕ್ಷೇತ್ರದಿಂದ ಅವರ ಪುತ್ರ ಪ್ರಕಾಶ್ ಕೋಳಿವಾಡ ಸ್ಪರ್ಧಿಸುವ ಸಾಧ್ಯತೆ ಇದೆ.ಯಡಿಯೂರಪ್ಪ ಅವರು ಉತ್ತರ ಕರ್ನಾಟಕ ಭಾಗದ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಒಂದು ವೇಳೆ ಅವರು ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೆ ಶಿಕಾರಿಪುರದಿಂದ ಹಾಲಿ ಶಾಸಕ ಬಿ.ವೈ.ರಾಘವೇಂದ್ರ ಅವರೇ ಸ್ಪರ್ಧಿಸಲಿದ್ದಾರೆ. ಯಡಿಯೂರಪ್ಪ ಶಿಕಾರಿಪುರದಿಂದ ಸ್ಪರ್ಧಿಸಿದರೆ ರಾಘವೇಂದ್ರ ಕ್ಷೇತ್ರ ಬದಲಾವಣೆಯಾಗಲಿದೆ.ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಯಡಿಯೂರಪ್ಪ ಅವರ ತವರು ಕ್ಷೇತ್ರ.

Buy Now on CodeCanyon