Surprise Me!

ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರಾ | ಕಾಂಗ್ರೆಸ್ ಗೆ ಆಗುವ 5 ಲಾಭಗಳು | Oneindia Kannada

2017-11-10 760 Dailymotion

ಬಿಜೆಪಿಯ ಪರಿವರ್ತನಾ ಯಾತ್ರೆ : ಕಾಂಗ್ರೆಸ್ಸಿಗೆ ಆಗುವ 5 ಲಾಭಗಳು! ಕರ್ನಾಟಕ ಬಿಜೆಪಿಯ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಆರು ದಿನಗಳನ್ನು ಪೂರೈಸಿದೆ. ದಕ್ಷಿಣ ಕನ್ನಡದ ಸುಳ್ಯದಿಂದ 7ನೇ ದಿನದ ಯಾತ್ರೆ ಶುಕ್ರವಾರ ಆರಂಭವಾಗಲಿದೆ. ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಬಿಜೆಪಿ ನಾಯಕರು ರಾಜ್ಯ ಪ್ರವಾಸ ಮಾಡಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು 2018ರ ಚುನಾವಣೆ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ.'ಬಿಜೆಪಿ ನಾಯಕರು ಮಾಡುತ್ತಿರುವುದು ಪರಿವರ್ತನಾ ಯಾತ್ರೆ ಅಲ್ಲ, ಪಶ್ಚಾತ್ತಾಪದ ನಾಟಕ ಯಾತ್ರೆ. ಮಾಡಿದ ಪಾಪ ಅವರನ್ನು ಕೊರೆಯುತ್ತಿದೆ. ಅದಕ್ಕಾಗಿ ಪ್ರಾಯಶ್ಚಿತ್ತದ ನಾಟಕ ಮಾಡುತ್ತಿದ್ದಾರೆ' ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾತ್ರೆಯವನ್ನು ವ್ಯಂಗ್ಯವಾಡಿದ್ದಾರೆ.ನವೆಂಬರ್ 2ರಂದು ಆರಂಭವಾದ ಬಿಜೆಪಿಯ ಪರಿವರ್ತನಾ ಯಾತ್ರೆ 75 ದಿನಗಳ ಕಾಲ ನಡೆಯಲಿದೆ. ಆಡಳಿತಾರೂಢ ಕಾಂಗ್ರೆಸ್ 'ಮನೆ-ಮನೆಗೆ ಕಾಂಗ್ರೆಸ್' ಎಂಬ ಅಭಿಯಾನ ನಡೆಸುತ್ತಿದೆ. ಅತ್ತ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 'ಕುಮಾರಪರ್ವ' ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಬಿಜೆಪಿ ಯಾತ್ರೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುವ ಲಾಭಗಳೇನು?

Buy Now on CodeCanyon