Surprise Me!

ಸದ್ಯದಲ್ಲೇ ಮುಜರಾಯಿ ದೇವಾಲಯಗಳಿಗೆ ದಲಿತ ಅರ್ಚಕರನ್ನ ತರಲು ಸಿದ್ದು ಸರ್ಕಾರ ಮುಂದಾಗಿದೆ | Oneindia Kannada

2017-12-01 1 Dailymotion

Government of Karnataka decided to have Dalit priests in Muzrai department temples. A batch of candidates from the dalit community have enrolled at the Agama Shalas run by the Muzrai department, which will certify temple priests and, if they clear the course, they will serve as priests at temples coming under the department. <br /> <br /> <br />ಮುಜರಾಯಿ ದೇವಾಲಯ: ಕ್ರಾಂತಿಕಾರಿ ನಿರ್ಧಾರಕ್ಕೆ ಮುಂದಾದ ಸರಕಾರ. ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ತಂದುಕೊಡುತ್ತಿರುವ ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಅರ್ಚಕರ ನೇಮಕಾತಿ ವಿಚಾರದಲ್ಲಿ ಸಿದ್ದರಾಮಯ್ಯ ಸರಕಾರ ಕ್ರಾಂತಿಕಾರಿ ಹೆಜ್ಜೆಯಿಡಲು ಮುಂದಾಗಿದೆ. ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಕಾನೂನಿನಲ್ಲಿ ಅವಕಾಶವಿರುವಂತೆ, ಮುಜರಾಯಿ ವ್ಯಾಪ್ತಿಯಡಿಯಲ್ಲಿ ಬರುವ ದೇವಾಲಯಗಳಿಗೆ ದಲಿತ ಅರ್ಚಕರನ್ನು ನೇಮಿಸಲು ಸರಕಾರ ತಯಾರಿ ಮಾಡಿಕೊಂಡಿದೆ. ಕೆಲವೇ ದಿನಗಳ ಹಿಂದೆ ಕೇರಳ ಸರಕಾರ ಕೂಡಾ, ದಲಿತ ಅರ್ಚಕರನ್ನು ನೇಮಿಸುವ ಪ್ರಕ್ರಿಯೆಗೆ ಚಾಲನೆ ನೀಡಿತ್ತು.ಈ ಸಂಬಂಧ ಹೇಳಿಕೆ ನೀಡಿರುವ ಮುಜರಾಯಿ ಖಾತೆಯ ಸಚಿವ ರುದ್ರಪ್ಪ ಲಮಾಣಿ, ರಾಜ್ಯಾದ್ಯಂತ ಈಗಾಗಲೇ 38 ಆಗಮ ಶಾಲೆಗಳನ್ನು ತೆರೆಯಲಾಗಿದೆ ಮತ್ತು 18 ರಿಂದ 40 ವರ್ಷ ವಯೋಮಿತಿಯವರು ಇಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.

Buy Now on CodeCanyon