Zee Kannada channel's Nagini serial actor Dheekshith Shetty was attacked by three strangers in Vijayanagara, Bengaluru last night (December 7th). Dheekshith Shetty has lodged the complaint in Vijayanagara Police Station. <br /> <br />'ಜೀ ಕನ್ನಡ' ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ನಾಗಿಣಿ' ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಮೇಲೆ ಹಲ್ಲೆ ಆಗಿದೆ. ಬೆಂಗಳೂರಿನ ವಿಜಯ ನಗರದಲ್ಲಿ ನಿನ್ನೆ ತಡ ರಾತ್ರಿ ಈ ಘಟನೆ ನಡೆದಿದೆ. 'ನಾಗಿಣಿ' ಧಾರಾವಾಹಿಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದ ದೀಕ್ಷಿತ್ ಆ ಸೀರಿಯಲ್ ಮೂಲಕ ದೊಡ್ಡ ಜನಪ್ರಿಯತೆ ಗಳಿಸಿದ್ದರು. ಅಲ್ಲಿದೆ ಇತ್ತೀಚಿಗಷ್ಟೆ ಜೀ ಕನ್ನಡ ವಾಹಿನಿಯ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ರಿಯಾಲಿಟಿ ಶೋ ಕಾರ್ಯಕ್ರಮವನ್ನು ಕೂಡ ಗೆದ್ದಿದ್ದರು. ಆದರೆ ಕಿರುತೆರೆಯಲ್ಲಿ ದೊಡ್ಡ ಜನಪ್ರಿಯತೆ ಗಳಿಸಿದ ಈ ನಟನ ಮೇಲೆ ಈಗ ಹಲ್ಲೆ ನಡೆದಿದೆ. ಜೊತೆಗೆ ಈಗಾಗಲೇ ಈ ಪ್ರಕರಣಕ್ಕೆ ಸಂಬಂದಿಸಿದಂತೆ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟ ದೀಕ್ಷಿತ್ ಶೆಟ್ಟಿ ನಿನ್ನೆ ತಡರಾತ್ರಿ ವಿಜಯನಗರದ ಮಾರುತಿ ಮಂದಿರದ ಬಳಿ ತಮ್ಮ ಕಾರ್ ನಲ್ಲಿ ಬರುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ.