BJP Shimoga district president Rudregowda group Wednesday met Yeddyurappa, urged Shimoga city constituency BJP ticket for him. KS Eshwarappa is also ticket aspirant for same constituency shed tears in a press meet on Thursday, when journalist asked about latest development of the party. <br /> <br /> ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ತಾರಕಕ್ಕೆ ಏರಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಬೆಂಬಲಿಗರು ಬುಧವಾರ ರಾತ್ರಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ, ನಗರ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ನೀಡುವುದು ಬೇಡ. ರುದ್ರೇಗೌಡರಿಗೆ ಈ ಬಾರಿ ಟಿಕೆಟ್ ನೀಡಿ ಎಂದು ಒತ್ತಾಯಿಸಿದ್ದಾರೆ.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿಳಕಿ ಕೃಷ್ಣಮೂರ್ತಿ, ಕೆ.ಎಸ್.ಈಶ್ವರಪ್ಪ ಕುರಿತಂತೆ ಹಗುರವಾದ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಅವರ ಹೇಳಿಕೆಗಳು ಇದೀಗ ಬಿಜೆಪಿಯಲ್ಲಿ ಆಂತರಿಕ ಕಲಹ ಹುಟ್ಟುಹಾಕಿದೆ.