Congress MLA NA Harris said his son will surrender before Cubbon park police soon who is absconded after filling IPC section 506 case against him on Sunday. <br /> <br /> <br />ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ನಾನೇ ಪೊಲೀಸರಿಗೆ ಒಪ್ಪಿಸುತ್ತೇನೆ ಎಂದು ಹ್ಯಾರಿಸ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಈ ರೀತಿ ಮಾಡಲು ಅವನಿಗೆ ಅವಕಾಶ ನೀಡಿರಲಿಲ್ಲ. ನನ್ನ ಮಗನ ಕೃತ್ಯದಿಂದಾಗಿ ನನಗೂ ನೋವಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಲು ಅವಕಾಶವನ್ನು ನೀಡಿಲ್ಲ ಎಂದರು.