Karnataka BJP has started Bengaluru Rakshisi ( Protect Bengaluru) Padayatra from March 2nd. The Jatha is organized by BJP's state unit. Union Minister Ananth Kumar speaks about Padayatra & slams Siddaramaiah <br />ಕರ್ನಾಟಕ ಬಿಜೆಪಿ ಆಯೋಜಿಸಿರುವ ಮೂರು ದಿನಗಳ ಬೆಂಗಳೂರು ರಕ್ಷಿಸಿ ಯಾತ್ರೆ ಇಂದಿನಿಂದ ಆರಂಭವಾಗಿದ್ದು, ರಾಜ್ಯದ ಘಟಾನುಘಟಿ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ, ನಂತರ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಿಜೆಪಿ ನಾಯಕರು ಯಾತ್ರೆ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಯಾತ್ರೆ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ಕೇಂದ್ರ ಸಚಿವರಾದ ಅನಂತ್ ಕುಮಾರ್ ಪಾದಯಾತ್ರೆ ಬಗ್ಗೆ ಮಾತನಾಡಿ ಹಾಗೆ ಸಿದ್ದರಾಮಯ್ಯನವರನ್ನ ಲೇವಡಿ ಮಾಡಿದ್ದಾರೆ <br />