ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಗೆ ಸ್ಪರ್ಧಿಸಿರುವ ಒಬ್ಬ ಪಕ್ಷೇತರ ಅಭ್ಯರ್ಥಿಯೂ ಸಹ ನನ್ನ ಎದುರಾಳಿ. ಆದರೆ, ನಮ್ಮ ಪಕ್ಷಕ್ಕೆ ಜನರು ಬೆಂಬಲ ನೀಡುತ್ತಿದ್ದಾರೆ' ಎಂದು ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಹೇಳಿದರು. <br /> <br /> ಶಿವಮೊಗ್ಗ ನಗರ ಕ್ಷೇತ್ರದ ಹಾಲಿ ಶಾಸಕರು ಕೆ.ಬಿ.ಪ್ರಸನ್ನ ಕುಮಾರ್. 2018ರ ವಿಧಾನಸಭೆ ಚುನಾವಣೆಗೆ ಅವರು ಅಭ್ಯರ್ಥಿ. ಕ್ಷೇತ್ರದಲ್ಲಿ ಮನೆ-ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ನಡುವೆಯೇ ಒನ್ ಇಂಡಿಯಾ ಕನ್ನಡಕ್ಕೆ ಅವರು ಸಂದರ್ಶನ ನೀಡಿದರು.