Speaking to media persons in Mangaluru PWD Minister HD Revanna said that there is no confusion between Chief Minister HD Kumaraswamy and former CM Siddaramaiah about presenting state budget. <br /> <br /> <br />ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚಾರ್ಮಾಡಿ ಘಾಟ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿರುವುದರಿಂದ ಕೇಂದ್ರ ಸರಕಾರ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. "ಬಜೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ನಾವು ಈ ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತೇವೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡಿಸಲಿರುವ ಬಜೆಟ್ ಬಗ್ಗೆ ಸಿದ್ದರಾಮಯ್ಯನರಿಗೆ ಯಾವುದೇ ಅಸಮಾಧಾನವಿಲ್ಲ. ಬಜೆಟ್ ಮಂಡನೆಗೆ ಅವರು ಸಮ್ಮತಿಸಿದ್ದಾರೆ," ಎಂದು ಹೇಳಿದರು.