HD Kumaraswamy vacated his rental house Ekadanta in Hubballi. The owner of the house Suresh Rayareddy has decided to sale it. <br /> <br />ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಬಲವರ್ಧನೆ ಮಾಡುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಬಾಡಿಗೆ ಪಡೆದಿದ್ದ ಮನೆಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೆರವುಗೊಳಿಸಿದ್ದಾರೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಜೆಡಿಎಸ್ ಪ್ರಬಲವಾಗಿರದ ಕಾರಣ, ಅಲ್ಲಿಯೇ ಕೆಲವು ಕಾಲ ನೆಲೆಯೂರಿ ಪಕ್ಷ ಸಂಘಟನೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡಿದ್ದರು. <br />
