Remain vacant after sad demise of union minister Ananth Kumar, no possibilities of by election for Bangalore south parliament constituency since general election will be held within six months.<br /><br />ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಕಾಲಿಕ ನಿಧನದಿಂದ ಬೆಂಗಳೂರು ದಕ್ಷಿಣ ಲೋಕಸಭಾ ಮತ ಕ್ಷೇತ್ರದ ಸ್ಥಾನ ತೆರವಾಗಿದ್ದು, ಈ ಸ್ಥಾನಕ್ಕೆ ಚುನಾವಣೆ ನಡೆಯುವುದು ಅನುಮಾನ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇದ್ದು, ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುವುದು ಅನುಮಾನ ಎನ್ನಲಾಗಿದೆ.