Munirathna revealed a surprising fact about Ambareesh. Rebel star Ambareesh had not taken remuneration for Kurukshetra movie. He has acted as Bheeshma role in this movie.<br /><br />ರೆಬೆಲ್ ಸ್ಟಾರ್ ಅಂಬರೀಶ್ ಅವರ ಕೊನೆಯ ಸಿನಿಮಾ ಕುರುಕ್ಷೇತ್ರ ಬಿಡುಗಡೆಗೆ ಸಜ್ಜಾಗಿದೆ. ದರ್ಶನ್ ದುರ್ಯೋಧನನಾಗಿ ನಟಿಸಿರುವ ಈ ಚಿತ್ರದಲ್ಲಿ ಅಂಬರೀಶ್ ಭೀಷ್ಮನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೇ ಅಂಬಿ ಇದ್ದಾಗಲೇ ಈ ಚಿತ್ರ ತೆರೆಕಾಣಬೇಕಿತ್ತು. ಆದ್ರೆ, ಪೋಸ್ಟ್ ಪ್ರೊಡಕ್ಷನ್ ಕೆಲಸದ ವಿಳಂಬದಿಂದ ಸಾಧ್ಯವಾಗಿರಲಿಲ್ಲ. ಈಗ ಆಗಸ್ಟ್ 9 ರಂದು ಕುರುಕ್ಷೇತ್ರ ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ. ವಿಶೇಷ ಅಂದ್ರೆ ಅಂಬರೀಶ್ ಅವರು ಈ ಸಿನಿಮಾದಲ್ಲಿ ಸಂಭಾವನೆ ಪಡೆಯದೇ ನಟಿಸಿದ್ದಾರಂತೆ. ಹೀಗಂತ ಸ್ವತಃ ನಿರ್ಮಾಪಕ ಮುನಿರತ್ನ ಅವರೇ ಬಹಿರಂಗಪಡಿಸಿದ್ದಾರೆ.<br />