Dhanya Ramkumar, daughter of Poornima and Ramkumar is currently preparing for her debut film. She is playing leading role with actor Suraj Gowda in the new movie.<br /><br /><br /> ಡಾ. ರಾಜ್ ಕುಮಾರ್ ಕುಟುಂಬದಿಂದ ಮತ್ತೋರ್ವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಈಗಾಗಲೆ ರಾಜ್ ಮೊಮ್ಮಕ್ಕಳು ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಮಗ ವಿನಯ್ ರಾಜ್ ಕುಮಾರ್ ಮೂರು ಸಿನಿಮಾಗಳಲ್ಲಿ ಮಿಂಚಿದ್ದಾರೆ. ಅಲ್ಲದೆ ಇನ್ನು ಎರಡು-ಮೂರು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಡಾ.ರಾಜ್ ಮತ್ತೋರ್ವ ಮೊಮ್ಮಗ ಧೀರನ್ ರಾಮ್ ಕುಮಾರ್ ಸಹ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ಜೊತೆಗೀಗ ರಾಜ್ ಕುಮಾರ್ ಕುಟುಂಬದಿಂದ ಮೊದಲ ಬಾರಿಗೆ ನಾಯಕಿಯೊಬ್ಬಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.