“ಆತ್ಮ ನಿರ್ಭರ್ ಭಾರತ್ ಆರ್ಥಿಕ ಪುನಶ್ಚೇತನ ಯೋಜನೆಯ ಎರಡನೇ ದಿನದ ಘೋಷಣೆಗಳ ಕುರಿತು ಮುಖ್ಯಮಂತ್ರಿಗಳ ಪ್ರತಿಕ್ರಿಯೆ
1. ಆತ್ಮ ನಿರ್ಭರ್ ಭಾರತ್ ಆರ್ಥಿಕ ಪುನಶ್ಚೇತನ ಯೋಜನೆಯೆ ಎರಡನೇ ದಿನದ ಘೋಷಣೆಗಳು, ಪ್ರಧಾನಿ ಮೋದಿಜಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತದೆ. ಅಲ್ಲದೆ ಎಲ್ಲರನ್ನೊಳಗೊಂಡ ಪ್ರಗತಿಯ ಆಶಯವನ್ನು ದೃಢಪಡಿಸುತ್ತದೆ.
2. ವಲಸೆ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಸಣ್ಣ ರೈತರು, ಕೂಲಿ ಕಾರ್ಮಿಕರು ಮೊದಲಾದ ಎಲ್ಲ ಸಮುದಾಯಗಳಿಗೆ ಮೂಲಸೌಲಭ್ಯ ಮತ್ತು ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಶ್ಲಾಘನೀಯ.
3. ರಾಜ್ಯ ಮತ್ತು ಪ್ರಾಂತೀಯ ವಲಯದಲ್ಲಿ ಇರುವ ಕನಿಷ್ಠ ವೇತನ ತಾರತಮ್ಯವನ್ನು ತೆಗೆದು ಹಾಕುವುದು, ತಮ್ಮ ಊರುಗಳಿಗೆ ಹಿಂದಿರುಗಿದ ವಲಸೆ ಕಾರ್ಮಿಕರಿಗೆ ವರದಾನವಾಗಲಿದೆ.
4. 8 ಕೋಟಿ ವಲಸಿಗ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೂ 3500 ಕೋಟಿ ರೂ. ವೆಚ್ಚದಲ್ಲಿ ಉಚಿತ ಪಡಿತರ ವಿತರಣೆ, ವಲಸೆ ಕಾರ್ಮಿಕರಿಗೆ ಮನೆ ಬಾಡಿಗೆ ದರ ನಿಗದಿ ಮೊದಲಾದ ಕ್ರಮಗಳು ಅವರಿಗೆ ಹೆಚ್ಚಿನ ಭದ್ರತೆಯನ್ನು ನೀಡಲಿದೆ.,
5. ಮುದ್ರಾ ಶಿಶು ಸಾಲ ಯೋಜನೆಗೆ ಬಡ್ಡಿ ರಿಯಾಯಿತಿ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ವರೆಗೆ ವಿಶೇಷ ಸಾಲ ಸೌಲಭ್ಯ ಒದಗಿಸಲು 5 ಸಾವಿರ ಕೋಟಿ ಅನುದಾನ ನಿಗದಿ ಪಡಿಸಿರುವುದು ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಅನುಕೂಲವಾಗಲಿದೆ.
6. ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಗೃಹ ಸಾಲ ಸಬ್ಸಿಡಿ ಯೋಜನೆಗೆ 70 ಸಾವಿರ ಕೋಟಿ ರೂ. ನೆರವು ಈ ವರ್ಗದ ಜನರ ಕನಸು ಸಾಕಾರಗೊಳಿಸಲು ನೆರವಾಗಲಿದೆ.,
7. ಸಣ್ಣ ಮತ್ತು ಮಧ್ಯಮ ರೈತರಿಗೆ ಬೆಳೆ ಕೊಯ್ಲು ಮತ್ತು ಕೊಯ್ಲೋತ್ತರ ನಿರ್ವಹಣೆಗೆ ರೈತ ನಿಧಿಗೆ ಹೆಚ್ಚುವರಿ 30 ಸಾವಿರ ಕೋಟಿ ರೂ. ಸೇರ್ಪಡೆ
8. ಸಣ್ಣ ರೈತರು, ಪಶುಪಾಲಕರು ಮತ್ತು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನಡಿ 2 ಲಕ್ಷ ಕೋಟಿ ಸಾಲ ಸೌಲಭ್ಯ ನೀಡುವ ಕ್ರಮಗಳು ಸಂಕಷ್ಟಕ್ಕೊಳಗಾದ ಈ ವಲಯಗಳ ಜನರಿಗೆ ಉಸಿರು ನೀಡಿದೆ.