ಜೀಪ್ ಕಂಪನಿಯು ತನ್ನ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. 2021ರ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ
ಹಲವಾರು ಅಪ್‌ಡೇಟ್‌ಗಳನ್ನು ಮಾಡಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯು ಹಲವಾರು ಫೀಚರ್ ಹಾಗೂ ಎಕ್ವಿಪ್‌ಮೆಂಟ್‌ಗಳನ್ನು ಹೊಂದಿದೆ.

ಹೊಸ ಜೀಪ್ ಕಂಪಾಸ್ ಎಸ್‌ಯುವಿಯ ವಿನ್ಯಾಸದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಈ ಎಸ್‌ಯುವಿಯ ಮುಂಭಾಗದಲ್ಲಿ ಏಳು-ಸ್ಲ್ಯಾಟ್ ಸಿಗ್ನೆಚರ್ ಗ್ರಿಲ್ ಜೊತೆಗೆ
ಹೊಸ ಹನಿಕೂಂಬ್ ಮೆಶ್ ಅಳವಡಿಸಲಾಗಿದೆ.

ಇದರ ಜೊತೆಗೆ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿರುವ ಹೆಡ್‌ಲ್ಯಾಂಪ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೊಂದಿರುವ ಅಪ್‌ಡೇಟೆಡ್ ಫ್ರಂಟ್ ಬಂಪರ್,
ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್ ಹಾಗೂ ಟೇಲ್‌ಲೈಟ್ ಹಾಗೂ ಹಿಂಭಾಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.