ಟಿವಿಎಸ್ ಮೋಟಾರ್ ಕಂಪನಿಯು ತನ್ನ ಅಪಾಚೆ ಸರಣಿಯ ಪ್ರೀಮಿಯಂ ಬೈಕುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದಾಗಿನಿಂದ ಜಾಗತಿಕವಾಗಿ 4 ಮಿಲಿಯನ್ ಯುನಿಟ್ ಗಳನ್ನು ಮಾರಾಟ ಮಾಡಿ ಹೊಸ ಮೈಲಿಗಲ್ಲು ಸಾಧಿಸಿರುವುದಾಗಿ ತಿಳಿಸಿದೆ.<br /><br />ಹೊಸೂರು ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಟಿವಿಎಸ್ ಅಪಾಚೆ ಬೈಕ್ ಅನ್ನು ಮೊದಲ ಬಾರಿಗೆ 2005ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಯಿತು. <br /><br />ಟಿವಿಎಸ್ ಅಪಾಚೆ ಭಾರತದಲ್ಲಿ ಜನಪ್ರಿಯ ಪ್ರೀಮಿಯಂ ಬೈಕುಗಳಲ್ಲಿ ಒಂದಾಗಿದೆ. ಈ ಬೈಕ್ ಅನ್ನು ನೇಕೆಡ್ ಹಾಗೂ ಸೂಪರ್ ಸ್ಪೋರ್ಟ್ ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.