Surprise Me!

Tata Punch Prices Kannada | Manual & AMT Variant Prices, Packs, Mileage & Maintenance Cost

2021-10-18 1 Dailymotion

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಚ್ಚ ಹೊಸ ಪಂಚ್ ಮೈಕ್ರೊ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಹೊಸ ಕಾರು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷ ಬೆಲೆ ಹೊಂದಿದೆ. ಅಲ್ಫಾ ಪ್ಲಾಟ್‌ಫಾರ್ಮ್ ಆಧರಿಸಿರುವ ಹೊಸ ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದೆ. ಹೊಸ ಕಾರಿನಲ್ಲಿರುವ 1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ. ಹಾಗಾದ್ರೆ ಹೊಸ ಕಾರಿನಲ್ಲಿ ಇನ್ನು ಏನೆಲ್ಲಾ ವಿಶೇಷತೆಗಳಿವೆ ಎನ್ನುವುದನ್ನು ಈ ವಿಡಿಯೋದಲ್ಲಿ ಚರ್ಚಿಸಲಾಗಿದೆ.

Buy Now on CodeCanyon