ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ದುಮ್ಮಿ ಬಳಿ ಅಪಘಾತ | Chitradurga

#PublicTV #Chitradurga

Watch Live Streaming On http://www.publictv.in/live

ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ. ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗಿಸಿಕೊಂಡು ತಡರಾತ್ರಿ ಸ್ವಗ್ರಾಮವಾದ ಬಿದುರ್ಗಕ್ಕೆ ತೆರಳುತಿದ್ರು.ಆಗ ಚಿತ್ರದುರ್ಗದಿಂದ ಬರುತಿದ್ದ ದುರ್ಗಾಂಬ ಎಂಬ ಖಾಸಗಿ ಬಸ್ ಒವರ್ ಟೇಕ್ ಮಾಡಿ ಮುನ್ನುಗ್ಗುವಾಗ ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ನಾಗರಾಜ್(೪೩), ಪತ್ನಿಯಾದ ಶೈಲಜ(೪೦) ವೀರೇಶ್(೧೩) ಸಂತೋಷ್ (೧೫) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿನೀಡಿ,ಪರಿಶೀಲನೆ ನೆಡೆಸಿದ್ದೂ,ಈ ಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.