ಬೀದರ್‌ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ..! | R Ashok | Public TV

ಗಡಿ ಜಿಲ್ಲೆ ಬೀದರ್‌ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ `ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ' ಕಾರ್ಯಕ್ರಮದಲ್ಲಿ ಸಚಿವ ಆರ್.ಅಶೋಕ್ ಭಾಗಿಯಾಗಿದ್ದಾರೆ. ಅಲಂಕೃತಗೊಂಡ ಎತ್ತಿನ ಬಂಡಿಯಲ್ಲಿ ಸಚಿವರ ಭವ್ಯ ಮೆರವಣಿಗೆ ನಡೆಸಲಾಯ್ತು. ಇದೇ ವೇಳೆ ಡೊಳ್ಳು ಕುಣಿತ, ತಮಟೆ, ಲಮಾಣಿ ನೃತ್ಯ, ಮಹಿಳಾ ತಮಟೆಯೊಂದಿಗೆ ಸ್ವಾಗತ ಕೋರಲಾಯ್ತು. ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಭಾಗಿಯಾಗಿದ್ದಾರೆ. ಸರಿಗಮಪ ಖ್ಯಾತಿಯ ಹನುಮಂತ ಲಂಬಾಣಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವೂ ನಡೆಯಲಿದೆ. ಇದೇ ವೇಳೆ ಕಾಂಗ್ರೆಸ್ ವಿರುದ್ಧ ಅಶೋಕ್ ಕಿಡಿಕಾರಿದ್ರು. ಇಂದು ರಾತ್ರಿ ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

Watch Live Streaming On http://www.publictv.in/live