Surprise Me!

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗರ ಪಂಚಮಿ‌ ಆಚರಣೆ: ವಿಡಿಯೋ

2025-07-29 50 Dailymotion

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ರಾಜ್ಯದ ಪ್ರಸಿದ್ಧ ನಾಗ ಕ್ಷೇತ್ರಗಳಲ್ಲಿ ಒಂದಾದ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದಿಂದ ನಾಗರ ಪಂಚಮಿ‌ಯನ್ನು ಆಚರಿಸಲಾಯಿತು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನಾಗಪ್ರತಿಷ್ಠೆ ಮಂಟಪದಲ್ಲಿ ನಾಗರಾಜನಿಗೆ ಅರ್ಚಕರು ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ ನೆರವೇರಿಸಿದರು. ನಂತರ ಮಹಾಮಂಗಳಾರತಿ ಮಾಡಿದರು. ವಿಶೇಷ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿ ಪ್ರಸಾದ ನೀಡಿದರು. ಶ್ರೀ ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠೆ ಮಂಟಪದಲ್ಲಿ ನಾಗರಾಜನಿಗೆ ಹಾಲು ಮತ್ತು ಎಳನೀರಿನ ಅಭಿಷೇಕ ನೆರವೇರಿದ ಸಮಯದಲ್ಲಿ ಭಕ್ತಾಧಿಗಳು ನೀಡಿದ ಕ್ಷೀರ ಮತ್ತು ಎಳನೀರನ್ನು ಅರ್ಚಕರು ನಾಗಪ್ರತಿಷ್ಠೆಗೆ ಎರೆದರು. ತನುವಿನೊಂದಿಗೆ ಹಿಂಗಾರವನ್ನೂ ಸಮರ್ಪಿಸಿದರು. ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿತ್ತು. ಮಂಗಳವಾರ ದೇಗುಲವನ್ನು ಹೂವುಗಳಿಂದ ವಿಶೇಷ ರೀತಿಯಲ್ಲಿ ಅಲಂಕರಿಸಲಾಗಿತ್ತು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಹಾಗೂ ಸಮಿತಿ ಸದಸ್ಯರು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಮತ್ತಿತರರ ಅಧಿಕಾರಿಗಳು, ಸಿಬ್ಬಂದಿಗಳು, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ: ದಾವಣಗೆರೆ: ನಾಗರಪಂಚಮಿ ದಿನದಂದೇ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಾಗರಹಾವು ಪ್ರತ್ಯಕ್ಷ

ಇದನ್ನೂ ಓದಿ: ಭೀಮನ ಅಮಾವಾಸ್ಯೆ ಪ್ರಯುಕ್ತ ಸಿಗಂದೂರು ದೇವಿಗೆ ವಿಶೇಷ ಪೂಜೆ: ವಿಡಿಯೋ

Buy Now on CodeCanyon