Surprise Me!

ದಾವಣಗೆರೆ: ಕಾರಿನಲ್ಲಿ ಅಗ್ನಿ ಅವಘಡ; ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲು

2025-08-11 53 Dailymotion

ದಾವಣಗೆರೆ: ನಿಂತಿದ್ದ ಕಾರಿನಲ್ಲಿ‌‌ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿಯಿಂದ ಇಡೀ ಕಾರು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿ ಇರುವ ತೊಟ್ಟಿಲು ಬಳಿ ನಡೆದಿದೆ.

ಬೆಂಗಳೂರು ಮೂಲದ ಅಶೋಕ್‌ ಎನ್ನುವವರಿಗೆ ಸೇರಿದ ಕಾರು ಇದಾಗಿದೆ ಎಂಬುದು ತಿಳಿದು ಬಂದಿದೆ. ಕಾರಿನ ಮಾಲೀಕ ಆಶೋಕ್ ಕುಟುಂಬ ಸಮೇತ ದಾವಣಗೆರೆಯ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ, ಹತ್ತಿರದ ಶಾಂತಿ ಸಾಗರ (ಸೂಳೆಕೆರೆ)‌ ನೋಡಲು ಆಗಮಿಸಿದಾಗ ಈ ಅವಘಡ ಸಂಭವಿಸಿದೆ ಎಂಬುದು ತಿಳಿದು ಬಂದಿದೆ.

ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ : ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊತ್ತಿ ಉರಿದ ಕಾರನ್ನು ನೋಡಲು ಜನಸಾಗರವೇ ಹರಿದು ಬಂದಿತ್ತು. ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಬಸವಾಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಕೂದಲೆಳೆ ಅಂತರದಲ್ಲಿ ನಾಲ್ವರು ಪಾರು - FIRE BROKE OUT IN CAR

Buy Now on CodeCanyon