Surprise Me!

ಉಡುಪಿ: ಕೃಷ್ಣಮಠದ ರಾಜಾಂಗಣದಲ್ಲಿ ಸೆ.12ರಂದು 'ಭಾರತೀಯ ಜ್ಞಾನ ಪರಂಪರೆ' ಅಂತಾರಾಷ್ಟ್ರೀಯ ಸಮ್ಮೇಳನ

2025-09-09 5 Dailymotion

ಉಡುಪಿ: ರಾಜಾಂಗಣದಲ್ಲಿ ಸೆ. 12 ರಂದು 'ಭಾರತೀಯ ಜ್ಞಾನ ಪರಂಪರೆ' ಎನ್ನುವ ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಗೀತಾ ಮಂದಿರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಶ್ರೀಪಾದರು, ಭಾರತೀಯ ಜ್ಞಾನ ಪರಂಪರೆಯನ್ನು ಇನ್ನಷ್ಟು ವಿಸ್ತರಿಸಲು ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್​​ನಿಂದ ಮಾನವನ ಬುದ್ಧಿಶಕ್ತಿ ಕಡಿಮೆ ಬಳಕೆಯಾಗುತ್ತಿದೆ. ಹಾಗಾಗಿ, 'ಶ್ರೇಷ್ಠ ಭಾರತ ಪುನಃ ಜಾಗೃತವಾಗಬೇಕು' ಎಂಬುದು ನಮ್ಮ ಉದ್ದೇಶ. ಸಮ್ಮೇಳನದಲ್ಲಿ ಭಾರತೀಯ ಜ್ಞಾನ ಪರಂಪರೆಯ ಚರ್ಚೆ, ವಿಷಯ ಮಂಡನೆ ಇತ್ಯಾದಿ ನಡೆಯಲಿದೆ ಎಂದರು.

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ, ನಿಟ್ಟೆ ವಿವಿಯ ಭಾರತೀಯ ಜ್ಞಾನ ವ್ಯವಸ್ಥೆ ವಿಭಾಗ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಜ್ಞಾನ ಮಂಡಲೋತ್ಸವ ಪ್ರಯುಕ್ತ ಈ ಸಮ್ಮೇಳನ ನಡೆಯುತ್ತಿದೆ ಎಂದು ಹೇಳಿದರು.

ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೆ ವಿವಿಯ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಮಠದ ಆಸ್ಥಾನ ವಿದ್ವಾಂಸ ಕೇಶವ ರಾವ್ ತಾಡಪತ್ರಿ ಸಮ್ಮೇಳನಾಧ್ಯಕ್ಷರಾಗಿರಲಿದ್ದಾರೆ. ಸಂಸ್ಕೃತ ವಿವಿ ಕುಲಪತಿ ಪ್ರೊ. ಅಹಲ್ಯಾ ಎಸ್, ಹಿರಿಯ ವಿಜ್ಞಾನಿ ಡಾ. ಪ್ರಹ್ಲಾದ್ ರಾಮ್‌ರಾವ್, ಸಂಶೋಧಕ ಪ್ರೊ. ಶ್ರೀಪತಿ ತಂತ್ರಿ ಸಹಿತ ವಿವಿಧ ಕ್ಷೇತ್ರದ ಹಲವರು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದಲ್ಲಿ ಭಾರತೀಯ ಜ್ಞಾನ ಪರಂಪರೆಯ ಎಲ್ಲ ಆಯಾಮದ ಚರ್ಚೆಯೂ ನಡೆಯಲಿದೆ ಎಂದರು.

ಇದನ್ನೂ ಓದಿ : ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದರಲ್ಲಿ ತಪ್ಪೇನಿದೆ : ವಾಟಾಳ್ ನಾಗರಾಜ್ ಪ್ರಶ್ನೆ - VATAL NAGARAJ

Buy Now on CodeCanyon