ಇಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಅತಿಯಾದ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಶೀಘ್ರ ಪರಿಹಾರ ನೀಡುವುದಾಗಿ ಭರವಸೆ ನೀಡಿದ ಅವರು, ದುಡ್ಡಿಗೆ ಕೊರತೆ ಇಲ್ಲವೆಂದರು. ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಂಡಿದ್ದು, ವರದಿ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.