ಮೈಸೂರು: ಫುಟ್‌ಪಾತ್ ಮೇಲೆ ನಿಂತಿದ್ದ ಶಾಲಾ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದಿದೆ. ಆದರೆ, ಅದೃಷ್ಟಾವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ.

ಬುಧವಾರ ಸಂಜೆ ಸುಮಾರು 4ರ ಸಮಯದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಶಾಲಾ ವಿದ್ಯಾರ್ಥಿಗಳು ರಸ್ತೆಯ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ, ನಿಯಂತ್ರಣ ಕಳೆದುಕೊಂಡ ತರಕಾರಿ ತುಂಬಿದ ಗೂಡ್ಸ್ ವಾಹನವೊಂದು ಮಕ್ಕಳಿಗೆ ಗುದ್ದಿ, ಅವರ ಮೇಲೆ ಹರಿದಿದೆ. ಆದರೆ ಅದೃಷ್ಟವಶಾತ್ ಮಕ್ಕಳು ಗಂಭೀರ ಅಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಈ ಘಟನೆಯು ಸ್ಥಳೀಯರಲ್ಲಿ ಮತ್ತು ಪೋಷಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ವಾಹನ ಚಾಲಕರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ದೃಶ್ಯವು ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಮರಳು ಲಾರಿ - ಕಾರಿನ ನಡುವೆ ಭೀಕರ ಡಿಕ್ಕಿ: ಮಗು ಸೇರಿ 7 ಮಂದಿ ಸ್ಥಳದಲ್ಲೇ ದಾರುಣ ಸಾವು