ಇತ್ತೀಚೆಗೆ ಬೆಂಗಳೂರು ಮೂಲದ ಅಲ್ಟ್ರಾವೈಲೆಟ್ ಆಟೋಮೋಟಿವ್ (Ultraviolette Automotive), ಹೊಚ್ಚ ಹೊಸ ಎಕ್ಸ್47 (X47) ಹೆಸರಿನ ಇ-ಬೈಕ್‌ನ್ನು ಬಿಡುಗಡೆಗೊಳಿಸಿದೆ. ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ್ನು ಯುವ ಸಮೂಹವನ್ನು ಗಮನದಲ್ಲಿಟ್ಟುಕೊಂಡು ತುಂಬಾ ಚೆನ್ನಾಗಿ ವಿನ್ಯಾಸಗೊಳಿಸಲಾಗಿದೆ. ಅದಕ್ಕೆ ತಕ್ಕಂತೆ ಯಾವುದೇ ಕಾರಿಗೂ ಕಮ್ಮಿಯಿಲ್ಲ ಎಂಬಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಇದು ರೂ.2.49 ಲಕ್ಷ ಪರಿಚಯಾತ್ಮಕ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಮೊದಲ 5,000 ಬುಕ್ಕಿಂಗ್‌ಗಳ ನಂತರ, ರೂ.2.74 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. <br /> <br />#ultraviolette #ultraviolettex47 #ultravioletteev #evbikes #drivesparkkannada