ಹಾವೇರಿ: ದನ ಬೆದರಿಸುವ ಸ್ಪರ್ಧೆಯಲ್ಲಿ ಕೊಬ್ಬರಿ ಹೋರಿಯೊಂದು ಮನೆಗೆ ನುಗ್ಗಿದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಪ್ರತಿವರ್ಷ ಗ್ರಾಮದ ಮಧ್ಯಭಾಗದಲ್ಲಿರುವ ರಸ್ತೆಯಲ್ಲಿ ದನ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಈ ವರ್ಷವೂ ಸಹ ಗ್ರಾಮದ ಮಧ್ಯದಲ್ಲಿ ಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ.

ಅಖಾಡದಲ್ಲಿ ಹೋರಿಯನ್ನು ಬಿಡುತ್ತಿದ್ದಂತೆ ಅದು ಮನೆಗೆ ನುಗ್ಗಿದೆ. ಕೊಬ್ಬರಿ ಹೋರಿ ನೋಡಲು ಜಮಾವಣೆಗೊಂಡಿದ್ದ ಜನರು ಹೋರಿ ಬರುತ್ತಿದ್ದಂತೆ ಎದ್ದುಬಿದ್ದು ಮನೆಯಿಂದ ಹೊರ ಓಡಿಹೋಗಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ದನ ಬೆದರಿಸುವ ಸ್ಪರ್ಧೆ: ಹೋರಿ ತಿವಿದು ಮೂವರು ಸಾವು

ದೀಪಾವಳಿ ಹಬ್ಬದ ಅಂಗವಾಗಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ದನ ಬೆದರಿಸುವ ಸ್ಪರ್ಧೆಗಳಲ್ಲಿ ಮೂವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75) ಅವರು ಮನೆಗೆ ಹೊರಟಿದ್ದ ವೇಳೆ ಹಿಂದಿನಿಂದ ಬಂದ ಹೋರಿ ಹಾಯ್ದು ಸಾವನ್ನಪ್ಪಿದರೆ, ದೇವಿಹೊಸೂರು ಗ್ರಾಮದ ಘನಿಸಾಬ್ (75) ಎಂಬವರು ಹೋರಿ ತಿವಿದು ಸಾವನ್ನಪ್ಪಿದ್ದಾರೆ. ಹಾನಗಲ್ ತಾಲೂಕಿನ ತಿಳವಳ್ಳಿಯಲ್ಲಿ ಹೋರಿ ತಿವಿದು ಭರತ್ ಎಂಬ ಯುವಕ ಸಾವನ್ನಪ್ಪಿದ್ದಾನೆ.