Surprise Me!

ಡಿ.ಕೆ‌.ಶಿವಕುಮಾರ್ ಸಿಎಂ ಆಗಬೇಕೆಂದು ಪ್ರಾರ್ಥಿಸಿ ಶಬರಿಮಲೆಗೆ ಪಾದಯಾತ್ರೆ

2025-11-20 12 Dailymotion

ರಾಮನಗರ: ಡಿಸಿಎಂ ಡಿ.ಕೆ‌.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ಪ್ರಾರ್ಥಿಸಿ ಚನ್ನಪಟ್ಟಣ ತಾಲೂಕಿನ ಹನಿಯೂರು ಗ್ರಾಮದ ಕಾಂಗ್ರೆಸ್ ಯುವ ಮುಖಂಡರು ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ, ವಿಶೇಷ ಪಾದಯಾತ್ರೆ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವು ಆಗಾಗ್ಗೆ ಕೇಳಿ ಬರುತ್ತಿದೆ. ಅಲ್ಲಲ್ಲಿ, ಮುಂದಿನ ಸಿಎಂ ಡಿ.ಕೆ.ಶಿವಕುಮಾರ್ ಎಂಬ ಘೋಷಣೆ ಕೂಗಿದ ಘಟನೆಗಳೂ ನಡೆದಿವೆ. ಈ ನಡುವೆ ಕಾಂಗ್ರೆಸ್ ಮುಖಂಡರು ಡಿಸಿಎಂ ಡಿ.ಕೆ‌.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ಪೋಸ್ಟರ್​ ಹಿಡಿದು ಪಾದಯಾತ್ರೆ ಹೋಗುವ ಮೂಲಕ ಗಮನ ಸೆಳೆದಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಕಾಂಗ್ರೆಸ್ ಯುವ ಮುಖಂಡರಾದ ಹನಿಯೂರು ಗ್ರಾಮದ ಕಾಂತರಾಜ್ ಅವರ ಅಭಿಮಾನಿ ಬಳಗದವರು ಶಬರಿಮಲೆ ಯಾತ್ರೆಗೆ ಹೊರಟಿದ್ದಾರೆ. ಈ ಸಂದರ್ಭದಲ್ಲಿ ತಮ್ಮ‌ ನಾಯಕರಾದ ಡಿ.ಕೆ‌.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕೆಂದು ಅಯ್ಯಪ್ಪಸ್ವಾಮಿಗೆ ವಿಶೇಷ ಪಾರ್ಥನೆ ಸಲ್ಲಿಸಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಅವರ ಪಾತ್ರ ತುಂಬಾ ದೊಡ್ಡದಿದೆ. ಕಾಂಗ್ರೆಸ್ ಪಕ್ಷದ ಯಶಸ್ಸಿಗಾಗಿ ಅವರು ನಿರಂತರ ಶ್ರಮ ವಹಿಸಿದ್ದಾರೆ. 2028ರಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ನಂಬಿಕೆ ನಮಗಿದೆ. ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್​ ಹೈಕಮಾಂಡ್ ಅವರನ್ನು​ ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು. ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹನಿಯೂರು ಗ್ರಾಮದ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ವೈರಸ್​ ಭೀತಿ: ಶಬರಿಮಲೆಗೆ ತೆರಳುವ ಅಯ್ಯಪ್ಪ ಮಾಲಾಧಾರಿಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

Buy Now on CodeCanyon