ಗದಗ: ಬೆಳಗ್ಗೆ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಶಾಂತಿ ಚಿತ್ರಮಂದಿರ ಸುಟ್ಟು ಭಸ್ಮವಾಗಿರುವ ಘಟನೆ ಗದಗ ನಗರದಲ್ಲಿ ಸೋಮವಾರ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ಚಿತ್ರಮಂದಿರದ ಎಲ್ಲಾ ಕಟ್ಟಡ, ಕುರ್ಚಿ, ಫ್ಯಾನ್, ಸ್ಪೀಕರ್, ಪಿಒಪಿ ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟು ಹೋಗಿವೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಬೆಟಗೇರಿ ಬಡಾವಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರ ತನಿಖೆಯ ನಂತರವೇ ಸತ್ಯಾಸತ್ಯತೆ ತಿಳಿದು ಬರಬೇಕಿದೆ.

ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಪಾಂಡವಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಪ್ರಾಣ ಉಳಿಸಿದ ಸ್ಟೇಷನ್ ಮಾಸ್ಟರ್

ಪ್ರತ್ಯೇಕ ಘಟನೆ:

ಮದ್ಯದ ಬಾಟಲಿ ಲೇಬಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಬೆಂಗಳೂರು ಆನೇಕಲ್ನ ಜಿಗಣಿಯ ಕೈಗಾರಿಕಾ ಪ್ರದೇಶದಲ್ಲಿ ಡಿ.18ರಂದು ಮದ್ಯದ ಬಾಟಲಿಗಳ ಸ್ಟಿಕ್ಕರ್ ಹಾಲೋಗ್ರಾಮ್, ಲೇಬಲ್ ತಯಾರಿಸುವ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಕಾರ್ಖಾನೆ ಬೆಂಕಿ ಅನಾಹುತಕ್ಕೆ ತುತ್ತಾಗಿತ್ತು. ಆದರೆ ಯಾವುದೇ ಪ್ರಾಣಹಾನಿಯಾಗಿರಲಿಲ್ಲ.