ಬಳ್ಳಾರಿ: ಕಂಪ್ಲಿ ತಾಲೂಕಿನ ದೇವಲಾಪುರ ಕಣಿವೆ ಮಾರಮ್ಮ ದೇವಸ್ಥಾನ ಬಳಿಯ ರಾಜ್ಯ ಹೆದ್ದಾರಿ-29ರಲ್ಲಿ ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿ ಪಾಮ್ ಆಯಿಲ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಎಣ್ಣೆ ಸೋರಿಕೆ ಆಗಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೋರಿಕೆಯಾದ ಆಯಿಲ್ ಸಂಗ್ರಹಕ್ಕೆ ಮುಗಿಬಿದ್ದ ಜನ: ಹೆದ್ದಾರಿ ಪಕ್ಕಕ್ಕೆ ಲಾರಿ ಉರುಳಿಬಿದ್ದು, ಟ್ಯಾಂಕರ್ ಮೂಲಕ ಆಯಿಲ್ ಸೋರಿಕೆಯಾಗುತ್ತಿದೆ ಎಂಬ ವಿಷಯ ಸುತ್ತಮುತ್ತಲಿನ ಹಳ್ಳಿಗಳಿಗೆ ವ್ಯಾಪಿಸುತ್ತಿದ್ದಂತೆ ಸ್ಥಳೀಯ ಜನರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಬಕೆಟ್, ಪ್ಲಾಸ್ಟಿಕ್ ಬಿಂದಿಗೆ, ಕ್ಯಾನ್‌ಗಳು ಮತ್ತು ವಿವಿಧ ಪಾತ್ರೆಗಳೊಂದಿಗೆ ಬಂದು ಆಯಿಲ್ ತುಂಬಿಕೊಳ್ಳಲು ಮುಗಿಬಿದ್ದರು.

ಎದುರಿಗೆ ಬರುತ್ತಿದ್ದ ಬೈಕ್ಗಳಿಗೆ ದಾರಿ ಮಾಡಿಕೊಡುವ ಭರದಲ್ಲಿ ಅಪಘಾತ: ಪ್ರಾಥಮಿಕ ಮಾಹಿತಿಯಂತೆ ಟ್ಯಾಂಕರ್ ಲಾರಿ ಬೆಂಗಳೂರಿನಿಂದ ಗಂಗಾವತಿಗೆ ತೆರಳುತ್ತಿತ್ತು. ಎದುರಿಗೆ ಬರುತ್ತಿದ್ದ ಬೈಕ್ಗಳಿಗೆ ದಾರಿ ಮಾಡಿಕೊಡುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಟ್ಯಾಂಕರ್‌ಗೆ ಹಾನಿಯಾಗಿದ್ದು, ಅದರೊಳಗಿದ್ದ ಪಾಮ್ ಆಯಿಲ್ ಸೋರಿಕೆಯಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್-ಬೈಕ್ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು