ಹುಬ್ಬಳ್ಳಿ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ 25 ಟನ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಹಾಯಕ ನಿರ್ದೇಶಕ ಕೆ. ಆರ್. ರಾಯ್ಕರ್, ಆಹಾರ ನಿರೀಕ್ಷಕರಾದ ವಿಜಯಕುಮಾರ್ ಪತ್ತಾರ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಬಂಕಾಪುರದಿಂದ ಕರಾಡಕ್ಕೆ ಸಾಗಿಸುತ್ತಿದ್ದಾಗ ಅಧಿಕಾರಿಗಳು ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಇಕ್ಬಾಲ್ ಮದಾರ್ (54) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಆಹಾರ ನಿರೀಕ್ಷಕ ಶಿವಪ್ಪ ಹೊನ್ನಳ್ಳಿ ಅವರ ದೂರಿನ ಮೇರೆಗೆ ಹಳೇ ಹುಬ್ಬಳ್ಳಿ ಪೊಲೀಸರು ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಬಂಕಾಪುರದ ಕೆಲವು ಪ್ರಮುಖ ಕಿಂಗ್‌ಪಿನ್‌ಗಳು ಈ ಅಕ್ರಮ ಅಕ್ಕಿ ಸಾಗಾಟದ ಹಿಂದೆ ಇರುವ ಶಂಕೆ ವ್ಯಕ್ತವಾಗಿದೆ. ಅಕ್ರಮ ಜಾಲದ ಇತರ ಸದಸ್ಯರನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಸರ್ಕಾರ ಬಡವರ ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ಪಡಿತರ ವಿತರಣಾ ಯೋಜನೆಯ ಅಕ್ಕಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧವಾಗಿದ್ದು, ಈ ರೀತಿಯ ಅಕ್ರಮಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ಬಳ್ಳಾರಿ ಮಾಡೆಲ್ ಹೌಸ್ ಬೆಂಕಿ ಅವಘಡ: 8 ಮಂದಿ ವಶಕ್ಕೆ